ಲೋಕಸಭೆಯ ಸೋಲಿನ ಬಳಿಕ ಅಜಿತ್ ಪವಾರ್ ನೇತೃತ್ವದಲ್ಲಿ ಎನ್‌ಸಿಪಿ ಶಾಸಕರ ಸಭೆ | 5 ಶಾಸಕರು ಗೈರು

Update: 2024-06-06 15:38 GMT

Maharashtra Deputy Chief Minister Ajit Pawar | PC: PTI

ಮುಂಬೈ : ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಗುರುವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (NCP ಅಜಿತ್ ಪವಾರ್)ದ ಶಾಸಕರ ಸಭೆಗೆ 5 ಶಾಸಕರು ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಪಕ್ಷದ 41 ಶಾಸಕರ ಪೈಕಿ ಐವರು ಗೈರುಹಾಜರಾಗಿದ್ದು, ಉಪಸಭಾಪತಿ ನರಹರಿ ಜಿರ್ವಾಲ್ ವಿದೇಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಇತರರು ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾದ ಅಜಿತ್ ಪವಾರ್, ಪಕ್ಷದ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು ರಾಯಗಢ ಕ್ಷೇತ್ರದ ಏಕೈಕ ಸಂಸದ, ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸುನೀಲ್ ತಟ್ಕರೆ ಸಭೆಗೆ ಹಾಜರಾಗಿದ್ದರು.

ಲೋಕಸಭಾ ಚುನಾವಣೆಯಲ್ಲಿ ಎನ್‌ಸಿಪಿಯ ಅಜಿತ್ ಪವಾರ್ ಪಕ್ಷವು ರಾಯಗಢದ ಕೇವಲ ಒಂದು ಸ್ಥಾನವನ್ನು ಗೆದ್ದಿದೆ. ಬಾರಾಮತಿಯಲ್ಲಿನ ಪ್ರತಿಷ್ಠಿತ ಕ್ಷೇತ್ರದಲ್ಲಿ ಅಜಿತ್ ಅವರ ಎನ್ ಸಿ ಪಿ ಯು ಸೋಲೊಪ್ಪಿಕೊಂಡಿತು. ಬಾರಾಮತಿ ಕ್ಷೇತ್ರದಲ್ಲಿ ಎನ್‌ಸಿಪಿ (ಶರದ್ ಪವಾರ್) ಪಕ್ಷದ ಹಾಲಿ ಸಂಸದೆ ಸುಪ್ರಿಯಾ ಸುಳೆ ಅವರು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಅವರನ್ನು ಸೋಲಿಸಿದ್ದಾರೆ. ಆ ಮೂಲಕ ತಮ್ಮ ಸಂಸದ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ರಾಜ್ಯದಲ್ಲಿ ಸ್ಪರ್ಧಿಸಿರುವ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಪಕ್ಷದ ಸಾಧನೆಯ ಬಗ್ಗೆ ಮುಖಂಡರು ಮತ್ತು ಶಾಸಕರು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News