24 ವರ್ಷ ಪಕ್ಷ ಮುನ್ನಡೆಸಿದ ಶರದ್ ಪವಾರ್ ಗೆ ಕೃತಜ್ಞತೆ ಸಲ್ಲಿಸಿದ ಅಜಿತ್ ಪವಾರ್

Update: 2024-06-11 04:42 GMT

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) 1999ರ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಪಕ್ಷವನ್ನು ಸತತ 24 ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಮುತ್ಸದ್ಧಿ ಹಾಗೂ ಮಾವ ಶರದ್ ಪವಾರ್ ಅವರಿಗೆ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪಕ್ಷದ ಸಂಸ್ಥಾಪನಾ ದಿನಾಚರಣೆ ವೇಳೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಮುಂಬೈನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಪವಾರ್, ಕೇಂದ್ರದ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವ ಹುದ್ದೆಗಿಂತ ಕೆಳಗಿನ ಯಾವುದೇ ಹುದ್ದೆಯನ್ನು ಪಕ್ಷ ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

"ಸಂಪುಟ ದರ್ಜೆ ಸಚಿವ ಹುದ್ದೆ ಹೊರತಾದ ಯಾವುದೇ ಹುದ್ದೆಗಳನ್ನು ಪಕ್ಷ ಒಪ್ಪಿಕೊಳ್ಳುವುದಿಲ್ಲ ಎಂದು ನಾವು ಈಗಾಗಲೇ ಬಿಜೆಪಿಗೆ ಸ್ಪಷ್ಟಪಡಿಸಿದ್ದೇವೆ. ಹಲವು ಘಟಕ ಪಕ್ಷಗಳಿಗೆ ಸಚಿವ ಹುದ್ದೆ ನೀಡಬೇಕಾಗಿದೆ ಎಂದು ಅವರು ಹೇಳಿದ್ದಾರೆ" ಎಂದು ಪವಾರ್ ಬಹಿರಂಗಪಡಿಸಿದರು.

ಎನ್ ಸಿಪಿಯಲ್ಲಿ ಅಸಮಾಧಾನದ ಅಲೆ ಎದ್ದಿದೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, "ನಾವು ಈಗಲೂ ಎನ್ಡಿಎ ಭಾಗ" ಎನ್ ಡಿಎ ಪ್ರಸ್ತುತ 284 ಸಂಸದರನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಅದು 300ರ ಗಡಿ ದಾಟಲಿದೆ ಎಂದರು.

ಇತ್ತೀಚೆಗೆ ನಡೆದ ಲೋಕಸಭಾ ಚುಣಾವಣೆಯಲ್ಲಿ ಪವಾರ್ ನೇತೃತ್ವದ ಎನ್ ಸಿಪಿ ಸ್ಪರ್ಧಿಸಿದ ನಾಲ್ಕು ಸ್ಥಾನಗಳ ಪೈಕಿ ಕೇವಲ ಒಂದರಲ್ಲಿ ಜಯ ಸಾಧಿಸಿತ್ತು. ಶರದ್ ಪವಾರ್ ನೇತೃತ್ವದ ವಿರೋಧಿ ಬಣ ಸ್ಪರ್ಧಿಸಿದ್ದ 10 ಸ್ಥಾನಗಳ ಪೈಕಿ 8ನ್ನು ಗೆದ್ದುಕೊಂಡಿತ್ತು. ಅಜಿತ್ ಪತ್ನಿ ಸುನೇತ್ರಾ ಪವಾರ್, ಸೊಸೆ ಸುಪ್ರಿಯಾ ಸುಳೆ ವಿರುದ್ಧ ಬಾರಾಮತಿಯಲ್ಲಿ ಹೀನಾಯ ಸೋಲು ಅನುಭವಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News