ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಅಮಿತ್ ಶಾ

Screengrab: X/@ANI
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ (ಮಂಗಳವಾರ) ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇದರ ಬೆನ್ನಿಗೇ, ಶ್ರೀನಗರಕ್ಕೆ ಧಾವಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂತ್ರಸ್ತ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ, ಅವರಿಗೆ ಸಾಂತ್ವನ ಹೇಳಿದರು.
ಭಯೋತ್ಪಾದಕ ಗುಂಪಾದ ʼದಿ ರೆಸಿಸ್ಟೆನ್ಸ್ ಫ್ರಂಟ್ʼ ನ ಭಯೋತ್ಪಾದಕರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಈ ಭಯೋತ್ಪಾದಕ ದಾಳಿಯಲ್ಲಿ ಓರ್ವ ವಿದೇಶಿ ಪ್ರಜೆ ಸೇರಿದಂತೆ ಒಟ್ಟು 27 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆಯೇ ಶ್ರೀನಗರಕ್ಕೆ ದೌಡಾಯಿಸಿ, ಭದ್ರತಾ ಪಡೆಗಳೊಂದಿಗೆ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದರು. ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಕೂಡಾ ಈ ಭಯೋತ್ಪಾದಕ ದಾಳಿಯ ಕುರಿತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಸೇರಿದಂತೆ ಭದ್ರತಾ ಪಡೆಗಳ ಮುಖ್ಯಸ್ಥರಿಂದ ಮಾಹಿತಿ ಪಡೆದಿದ್ದರು.