ಮಧ್ಯಪ್ರದೇಶ | ಕಾರ್ಖಾನೆಯಲ್ಲಿ ಅಮೋನಿಯ ಅನಿಲ ಸೋರಿಕೆ : ಹಲವರು ಅಸ್ವಸ್ಥ
Update: 2025-04-09 13:25 IST

PC | ndtv
ಭೋಪಾಲ್: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಿಂದ ಹಲವರು ಅಸ್ವಸ್ಥಗೊಂಡಿರುವ ಬಗ್ಗೆ ವರದಿಯಾಗಿದೆ.
ರತ್ಲಾಮ್ ಜಿಲ್ಲೆಯ ಜಯೋರಾ ಪಟ್ಟಣದಲ್ಲಿ ಮಂಗಳವಾರ ರಾತ್ರಿ 10.30ರ ವೇಳೆ ಈ ಘಟನೆ ನಡೆದಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕಾರ್ಖಾನೆಯಿಂದ ಕಾರ್ಮಿಕರನ್ನು ಸ್ಥಳಾಂತರಿಸಿದರು.
ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ತ್ರಿಲೋಚನ್ ಈ ಕುರಿತು ಪ್ರತಿಕ್ರಿಯಿಸಿ, ಜಯೋರಾ ಪಟ್ಟಣದ ಪೋರ್ವಾಲ್ ಐಸ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಅನಿಲ ಸೋರಿಕೆ ಸಂಭವಿಸಿದೆ ಎಂದು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಮಾತನಾಡಿ, ಅನಿಲ ಸೋರಿಕೆಯನ್ನು ನಿಯಂತ್ರಿಸಲು ಅಧಿಕಾರಿಗಳು ತಕ್ಷಣ ನೀರನ್ನು ಸಿಂಪಡಿಸಿದರು. ಅಸ್ವಸ್ಥಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು.