ಅಂಡಮಾನ್ ಸಮುದ್ರದಲ್ಲಿ ಮೀನುಗಾರಿಕೆ ದೋಣಿಯಲ್ಲಿ 5 ಟನ್ ಮಾದಕ ದ್ರವ್ಯ ಪತ್ತೆ

Update: 2024-11-25 15:36 GMT

ಸಾಂದರ್ಭಿಕ ಚಿತ್ರ | PC : PTI

ಹೊಸದಿಲ್ಲಿ: ಭಾರತೀಯ ಕರಾವಳಿ ಕಾವಲು ಪಡೆಯು ಬೃಹತ್ ಪ್ರಮಾಣದ ಮಾದಕ ದ್ರವ್ಯ ಬೇಟೆಯಾಡಿದ್ದು, ಅಂಡಮಾನ್ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ದೋಣಿಯೊಂದರಿಂದ ಸುಮಾರು 5 ಟನ್ ನಷ್ಟು ಮಾದಕ ದ್ರವ್ಯ ವಶಪಡಿಸಿಕೊಂಡಿದೆ.

ಐಎಸ್‌ಜಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿರುವುದು ಬಹುಶಃ ಇದೇ ಮೊದಲು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದರು.

ಈ ತಿಂಗಳ ಆರಂಭದಲ್ಲಿ ನೌಕಾಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಸಮನ್ವಯದೊಂದಿಗೆ ಪೋರಬಂದರ್ ಕರಾವಳಿ ಬಳಿ ಸುಮಾರು 700 ಕೆಜಿ ತೂಕದ ಮೆಥಾಂಫೆಟಮೈನ್ ಅನ್ನು ವಶಪಡಿಸಿಕೊಂಡಿದ್ದ ಮಾದಕ ದ್ರವ್ಯ ನಿಯಂತ್ರಣ ದಳವು, ಈ ಸಂಬಂಧ ಎಂಟು ಮಂದಿ ವಿದೇಶಿ ಪ್ರಜೆಗಳನ್ನು ಬಂಧಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News