ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದ ಅಣ್ಣಾಮಲೈ
Update: 2025-04-04 16:32 IST

ಅಣ್ಣಾಮಲೈ (Photo: PTI)
ಚೆನ್ನೈ : ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಹಿಂದೆ ಸರಿದಿದ್ದಾರೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಪಕ್ಷದ ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಮತ್ತು ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದರು.
ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಬಿಜೆಪಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ. ನಾವೆಲ್ಲರೂ ಒಟ್ಟಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ, ಈ ಪಕ್ಷದ ಬೆಳವಣಿಗೆಗಾಗಿ ಅನೇಕರು ತಮ್ಮ ಪ್ರಾಣವನ್ನು ನೀಡಿದ್ದಾರೆ. ಈ ಪಕ್ಷಕ್ಕೆ ನಾನು ಯಾವಾಗಲೂ ಒಳ್ಳೆಯದನ್ನು ಬಯಸುತ್ತೇನೆ ಎಂದು ಹೇಳಿದರು.