ಪ್ರಕ್ಷುಬ್ಧತೆಯ ನಡುವೆಯೇ ಸಂಭಲ್‌ನಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರಿಕೆ
ಸಂಭಲ್: ಉತ್ತರ ಪ್ರದೇಶದ ಸಂಭಲ್‌ನಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರಿದಿರುವ ಹೊತ್ತಿನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಭಲ್ ಜಿಲ್ಲಾಡಳಿತ ಚಾಲನೆ ನೀಡಿದೆ.
ಸಂಭಲ್ ವಿಶೇಷ ಜಿಲ್ಲಾಧಿಕಾರಿ ವಂದನಾ ಮಿಶ್ರಾ ಪ್ರಕಾರ, ಕಳೆದ ಎರಡು ತಿಂಗಳಿನಿಂದ ಚಂದೌಲಿ ಪ್ರದೇಶದಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ ಎನ್ನಲಾಗಿದೆ.
"ಸಾರ್ವಜನಿಕ ಸ್ಥಳಗಳಲ್ಲಿನ ಅಕ್ರಮ ನಿರ್ಮಾಣಗಳ ವಿರುದ್ಧ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಕಳೆದ ಎರಡು ತಿಂಗಳಿನಿಂದ ಚಂದೌಲಿಯಲ್ಲಿ ಈ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ಸಂಭಲ್‌ನಲ್ಲಿ ನಡೆಯುತ್ತಿರುವ ವಿದ್ಯುತ್ ಕಳ್ಳತನದ ವಿರುದ್ಧವೂ ಈ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ" ಎಂದು ಅವರು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ ಶಾಹಿ ಜಾಮಾ ಮಸೀದಿ ಪ್ರದೇಶದಲ್ಲೂ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲಾಗಿತ್ತು.