ಕರ್ನಾಟಕ ಸಹಿತ ದೇಶಾದ್ಯಂತ 19 ಕಡೆ ಎನ್‌ಐಎ ದಾಳಿ
Update: 2023-12-18 08:12 GMT
ಹೊಸದಿಲ್ಲಿ: ಐಸಿಸ್ ಜೊತೆಗಿನ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಬೆಳಗ್ಗೆ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಸುಮಾರು 19 ಸ್ಥಳಗಳ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸಿದೆ.
ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್‌ನ ನಾಲ್ಕು, ಮಹಾರಾಷ್ಟ್ರದ ಮೂರು ಮತ್ತು ದಿಲ್ಲಿಯ ಒಂದು ಕಡೆ ದಾಳಿ ನಡೆಸಲಾಗಿದೆ.
ಕಳೆದ ವಾರ ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆ ಮಹಾರಾಷ್ಟ್ರದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ 15 ಮಂದಿಯನ್ನು ಬಂಧಿಸಿತ್ತು.
ಆರೋಪಿಗಳು ವಿದೇಶಿ ನಿರ್ವಾಹಕರ ನಿರ್ದೇಶನದ ಮೇರೆಗೆ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹಾಗೂ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.