ಅರವಿಂದ್ ಕೇಜ್ರಿವಾಲ್ ವಿರುದ್ಧ ದಿಲ್ಲಿ ಕೋರ್ಟ್ ಮೆಟ್ಟಿಲೇರಿದ ಈಡಿ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಮನವಿ

Update: 2024-05-20 18:48 IST
ಅರವಿಂದ್ ಕೇಜ್ರಿವಾಲ್ ವಿರುದ್ಧ ದಿಲ್ಲಿ ಕೋರ್ಟ್ ಮೆಟ್ಟಿಲೇರಿದ ಈಡಿ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಮನವಿ

                                                                   ಅರವಿಂದ್ ಕೇಜ್ರಿವಾಲ್ | PC : PTI

  • whatsapp icon

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಸಂಬಂಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಸೋಮವಾರ ಜಾರಿ ನಿರ್ದೇಶನಾಲಯ(ED)ವು ದಿಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯದ ಮೆಟ್ಟಿಲೇರಿದೆ.

ಅರವಿಂದ್ ಕೇಜ್ರಿವಾಲ್ ಅವರು ಸದ್ಯ ಮಧ್ಯಂತರ ಜಾಮೀನಿನ ಮೇಲಿದ್ದು, ಅವರು ಜೂನ್ 2ರಂದು ಶರಣಾಗತರಾಗಬೇಕಿದೆ ಎಂಬ ಸಂಗತಿಯನ್ನು ಜಾರಿ ನಿರ್ದೇಶನಾಲಯ(ED)ವು ನ್ಯಾಯಾಲಯದ ಗಮನಕ್ಕೆ ತಂದಿತು. ಜಾರಿ ನಿರ್ದೇಶನಾಲಯ(ED)ದ ಈ ಅರ್ಜಿಯನ್ನು ನ್ಯಾಯಾಲಯವು ಜೂನ್ 2ರಂದು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಸದ್ಯ ಹಿಂಪಡೆಯಲಾಗಿರುವ ದಿಲ್ಲಿ ಅಬಕಾರಿ ನೀತಿ ಸಂಬಂಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ(ED)ದಿಂದ ಬಂಧಿತರಾಗಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮೇ 10ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಆದರೆ, ಈ ಅವಧಿಯಲ್ಲಿ ಮುಖ್ಯಮಂತ್ರಿ ಕಚೇರಿಗಾಗಲಿ ಅಥವಾ ದಿಲ್ಲಿ ಕಾರ್ಯಾಲಯಕ್ಕಾಗಲಿ ಭೇಟಿ ನೀಡಕೂಡದು ಎಂದು ಅವರಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿತ್ತು.

ಸದ್ಯ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನ ಮುಕ್ತಾಯಗೊಂಡ ಮರುದಿನ, ಜೂನ್ 2ರಂದು ಅರವಿಂದ್ ಕೇಜ್ರಿವಾಲ್ ಮತ್ತೆ ಜೈಲಿಗೆ ಮರಳಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News