ಬಂಧನ ವಿರುದ್ಧ ಅರವಿಂದ ಕೇಜ್ರಿವಾಲ್ ಅರ್ಜಿ | ಸೋಮವಾರ(ಎ.29) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Update: 2024-04-28 21:57 IST
ಬಂಧನ ವಿರುದ್ಧ ಅರವಿಂದ ಕೇಜ್ರಿವಾಲ್ ಅರ್ಜಿ | ಸೋಮವಾರ(ಎ.29) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

                                                                                       ಅರವಿಂದ ಕೇಜ್ರಿವಾಲ್ | PC : PTI 

  • whatsapp icon

ಹೊಸದಿಲ್ಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರನ್ನು ಒಳಗೊಂಡ ಪೀಠ ಈ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಈ ಪ್ರಕರಣದಲ್ಲಿ ತನ್ನ ‘‘ಅಕ್ರಮ ಬಂಧನ’’ ‘‘ಮುಕ್ತ ಹಾಗೂ ನ್ಯಾಯಯುತ ಚುನಾವಣೆ’’ ಹಾಗೂ ‘‘ಒಕ್ಕೂಟ ವ್ಯವಸ್ಥೆ’’ ಆಧರಿತ ಪ್ರಜಾಪ್ರಭುತ್ವದ ತತ್ವಗಳ ಮೇಲಿನ ಅಭೂತಪೂರ್ವ ಆಕ್ರಮಣವಾಗಿದೆ ಎಂದು ಕೇಜ್ರಿವಾಲ್ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಈ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮೇಲೆ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಅಫಿಡಾವಿಟ್‌ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಲೋಕಸಭಾ ಚುನಾವಣೆ ಮುನ್ನ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಸಂದರ್ಭ ತನ್ನನ್ನು ಬಂಧಿಸಿರುವ ವಿಧಾನ ಹಾಗೂ ಸಮಯ ತನಿಖಾ ಸಂಸ್ಥೆಯ ನಿರಂಕುಶಾಧಿಕಾರವನ್ನು ಬಹಿರಂಗಪಡಿಸಿದೆ ಎಂದು ಅವರು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷ ಹಾಗೂ ಅದರ ನಾಯಕರನ್ನು ದಮನಿಸಲು ಜಾರಿ ನಿರ್ದೇಶನಾಲಯ ಹಾಗೂ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತನಗಿರುವ ವ್ಯಾಪಕ ಅಧಿಕಾರವನ್ನು ಕೇಂದ್ರ ಸರಕಾರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News