ದಿಲ್ಲಿ ಜಲ ಮಂಡಳಿ ಪ್ರಕರಣ: ಈಡಿ ಸಮನ್ಸ್ ಗೆ ಗೈರಾದ ಅರವಿಂದ್ ಕೇಜ್ರಿವಾಲ್

Update: 2024-03-18 05:32 GMT

ಅರವಿಂದ್ ಕೇಜ್ರಿವಾಲ್ (PTI)

ಹೊಸದಿಲ್ಲಿ: ದಿಲ್ಲಿ ಜಲ ಮಂಡಳಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು, ಜಾರಿ ನಿರ್ದೇಶನಾಲಯವು ಜಾರಿಗೊಳಿಸಿದ್ದ ಸಮನ್ಸ್ ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೈರಾಗಿದ್ದಾರೆ.

ಈ ಸಮನ್ಸ್ ಅನ್ನು ಕಾನೂನು ಬಾಹಿರ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷವು, ಕೇಂದ್ರದಲ್ಲಿನ ಬಿಜೆಪಿ ಸರಕಾರವು ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ ಎಂದೂ ದೂರಿದೆ.

ದಿಲ್ಲಿ ಜಲ ಮಂಡಳಿಯಲ್ಲಿನ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯವು, ಮಾರ್ಚ್ 18ರಂದು ತನ್ನ ಮುಂದೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ ಗೆ ಸಮನ್ಸ್ ಜಾರಿಗೊಳಿಸಿತ್ತು.

ಅರವಿಂದ್ ಕೇಜ್ರಿವಾಲ್ ಈಗಾಗಲೇ ದಿಲ್ಲಿ ಅಬಕಾರಿ ನೀತಿ ಸಂಬಂಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಂಟು ಸಮನ್ಸ್ ಗಳಿಗೆ ಗೈರಾಗಿದ್ದಾರೆ. ಇತ್ತೀಚೆಗೆ ಒಂಬತ್ತನೇ ಸಮನ್ಸ್ ಜಾರಿಗೊಳಿಸಿದ್ದ ಜಾರಿ ನಿರ್ದೇಶನಾಲಯವು, ಮಾರ್ಚ್ 21ರಂದು ತನ್ನೆದುರು ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News