ಅರವಿಂದ್ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ

Update: 2024-03-22 06:15 GMT

ಅರವಿಂದ್ ಕೇಜ್ರಿವಾಲ್ , ಸುಪ್ರೀಂ ಕೋರ್ಟ್ | Photo: PTI 

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯವು ತಮ್ಮನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಇಂದು (ಶುಕ್ರವಾರ) ನಡೆಸಲಿದೆ.

ಅರವಿಂದ್ ಕೇಜ್ರಿವಾಲ್ ಪರ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಮನವಿ ಮಾಡಿದರು.

ಅದಕ್ಕೆ ಪ್ರತಿಯಾಗಿ ಅರ್ಜಿಯನ್ನು ನ್ಯಾ. ಸಂಜೀವ್ ಖನ್ನಾ ಪೀಠದ ಮುಂದೆ ಸಲ್ಲಿಸಿ ಎಂದು ಮುಖ್ಯ ನ್ಯಾಯಮೂರ್ತಿಗಳು ಸಿಂಘ್ವಿಗೆ ಸೂಚಿಸಿದರು.

ನಂತರ ಸಿಂಘ್ವಿ ಅವರು ಅರ್ಜಿಯನ್ನು ಸಂಜೀವ್ ಖನ್ನಾ ನ್ಯಾಯಪೀಠದ ಮುಂದೆ ಸಲ್ಲಿಸಿದರು. ಅರ್ಜಿಯನ್ನು ಪರಿಶೀಲಿಸಿದ ನ್ಯಾ. ಖನ್ನಾ, ಮೂವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News