ಅಸ್ಸಾಂ | ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಮೃತದೇಹ ಪತ್ತೆ

Update: 2025-01-11 05:03 GMT

Photo | PTI

ಗುವಾಹಟಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶದ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಮೃತದೇಹ ಮೇಲಕ್ಕೆತ್ತಲಾಗಿದೆ ಎಂದು ಶನಿವಾರ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

ಉಮ್ರಾಂಗ್ಸೊದಲ್ಲಿದ್ದ ಕಲ್ಲಿದ್ದಲು ಗಣಿಗೆ ಸೋಮವಾರ ಹಠಾತ್ ನೀರು ನುಗ್ಗಿದ ಪರಿಣಾಮ 9 ಕಾರ್ಮಿಕರು ಸಿಲುಕಿಕೊಂಡಿದ್ದರು. ಈವರೆಗೆ ಇಬ್ಬರು ಕಾರ್ಮಿಕರ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇಂದು ಬೆಳಿಗ್ಗೆ ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಿದೆ. ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದ ಕಾರ್ಮಿಕರಿಗಾಗಿ ಹುಡುಕಾಟವು 6ನೇ ದಿನಕ್ಕೆ ಕಾಲಿಟ್ಟಿದೆ. ಈ ಮೊದಲು ನೇಪಾಳ ಮೂಲದ ಓರ್ವ ಕಾರ್ಮಿಕನ ಮೃತದೇಹವನ್ನು ಮೇಲಕ್ಕೆತ್ತಲಾಗಿತ್ತು. ಶನಿವಾರ ಸ್ಥಳದಿಂದ ಮತ್ತೊಂದು ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಮೃತ ಕಾರ್ಮಿಕನನ್ನು ಲಿಜೆನ್ ಮಗರ್(27) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ನೌಕಾಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಗಣಿಯಲ್ಲಿ ಸಿಲುಕಿದ್ದ ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ತೀರಾ ಕಡಿಮೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News