ಅಸ್ಸಾಂ: ಒಂದು ತಿಂಗಳ ಬಾಣಂತಿಯ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ

Update: 2023-09-19 17:49 GMT

ಸಾಂದರ್ಭಿಕ ಚಿತ್ರ.

ಗುವಾಹಟಿ: ಒಂದು ತಿಂಗಳ ಬಾಣಂತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಸೋಮವಾರ ರಾತ್ರಿ ಅಸ್ಸಾಂನ ಮೋರಿಗಾಂವ್ ಜಿಲ್ಲೆ ಪಸಾಟಿಯಾ ಪ್ರದೇಶದಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹೇಯ ಘಟನೆಯ ಸಂದರ್ಭ ನಿಕಿತಾ ದೇವಿ (25)ಯ ಪತಿ ಸಮೀಪದ ಚಿತ್ರಮಂದಿರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು,ಕರ್ತವ್ಯನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದರು.

ನಿಕಿತಾ ದೇವಿ ತನ್ನ ನವಜಾತ ಶಿಶುವಿನೊಂದಿಗೆ ಮನೆಯಲ್ಲಿದ್ದಾಗ ಬಾಗಿಲು ಮುರಿದು ಒಳನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಕೊಂದುಹಾಕಿದ್ದಾರೆ ಎಂದು ವರದಿಗಳು ತಿಳಿಸಿವೆ.

ತನಿಖೆಯನ್ನು ಆರಂಭಿಸಿರುವ ಪೋಲಿಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News