ಆಂಧ್ರ ಪ್ರದೇಶ ಸಹಿತ 4 ರಾಜ್ಯಗಳ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ

Update: 2024-03-16 11:27 GMT

ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯು ಎಪ್ರಿಲ್ 19ರಿಂದ ಏಳು ಹಂತದಲ್ಲಿ ಪ್ರಾರಂಭಗೊಳ್ಳಲಿದ್ದು, ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯೊಂದಿಗೆ ನಾಲ್ಕು ರಾಜ್ಯ ವಿಧಾನಸಭೆಗಳ ಚುನಾವಣೆಯನ್ನೂ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಪ್ರಕಟಿಸಿದ್ದಾರೆ.

ಎ.19 ರಂದು 60 ವಿಧಾನಸಭಾ ಕ್ಷೇತ್ರಗಳು ಹಾಗೂ 2 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಅರುಣಾಚಲ ಪ್ರದೇಶ ಹಾಗೂ 32 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಸಿಕ್ಕಿಂ ರಾಜ್ಯದಲ್ಲಿ ಏಕಕಾಲಕ್ಕೆ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳೆರಡನ್ನೂ ನಡೆಸಲಾಗುತ್ತದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

175 ಸದಸ್ಯ ಬಲ ಹೊಂದಿರುವ ಆಂಧ್ರಪ್ರದೇಶ ವಿಧಾನಸಭೆಗೆ ಮೇ 13ರಂದು ಚುನಾವಣೆ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಒಡಿಶಾ ವಿಧಾನಸಭೆಗೆ ಎರಡು ಹಂತದಲ್ಲಿ ಚುನಾವಣೆ ನಡೆಸಲಾಗುತ್ತಿದ್ದು, ಮೇ 25ರ ಮೊದಲ ಹಂತದಲ್ಲಿ 42 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದರೆ, ಜೂನ್ 1ರ ಎರಡನೆ ಹಂತದಲ್ಲಿ 42 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಒಡಿಶಾ ವಿಧಾನಸಭೆಯ ಒಟ್ಟು ಸದಸ್ಯ ಬಲ 84 ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News