ದಿಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಆತಿಶಿ ಆಯ್ಕೆ
Update: 2025-02-23 15:29 IST

ಆತಿಶಿ (Photo: PTI)
ಹೊಸದಿಲ್ಲಿ: ದಿಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ರವಿವಾರ ಆಯ್ಕೆ ಮಾಡಲಾಗಿದೆ.
ಆಪ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಆಪ್ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್, ಆತಿಶಿ ಸೇರಿದಂತೆ ಪಕ್ಷದ 22 ಶಾಸಕರು ಭಾಗವಹಿಸಿದ್ದರು.
ದಿಲ್ಲಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತವನ್ನು ಪಡೆದುಕೊಂಡು ಸರಕಾರ ರಚಿಸಿದೆ. ರೇಖಾ ಗುಪ್ತ ದಿಲ್ಲಿಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ದಿಲ್ಲಿ ವಿಧಾನಸಭೆಯ ಮೊದಲ ಅಧಿವೇಶನ ಫೆಬ್ರವರಿ 24ರಂದು ಪ್ರಾರಂಭವಾಗಲಿದೆ.