ದಿಲ್ಲಿ ಕಾಲ್ತುಳಿತ | ರಾತ್ರಿಯವರೆಗೂ ಮೃತರ ಮರಣೋತ್ತರ ಪರೀಕ್ಷೆ ನಡೆಸಿ, ಶವಾಗಾರದಲ್ಲೇ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ವಿತರಿಸಿದ ರೈಲ್ವೆ ಇಲಾಖೆ

Update: 2025-02-17 15:18 IST
ದಿಲ್ಲಿ ಕಾಲ್ತುಳಿತ | ರಾತ್ರಿಯವರೆಗೂ ಮೃತರ ಮರಣೋತ್ತರ ಪರೀಕ್ಷೆ ನಡೆಸಿ, ಶವಾಗಾರದಲ್ಲೇ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ವಿತರಿಸಿದ ರೈಲ್ವೆ ಇಲಾಖೆ

PC : hindustantimes.com

  • whatsapp icon

ಹೊಸದಿಲ್ಲಿ : ದಿಲ್ಲಿ ಕಾಲ್ತುಳಿತದಲ್ಲಿ ಮೃತರ ಮರಣೋತ್ತರ ಪರೀಕ್ಷೆಯನ್ನು ರಾತ್ರಿಯವರೆಗೂ ನಡೆಸಿ, ಶವಾಗಾರದಲ್ಲೇ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ನಗದು ಪರಿಹಾರವನ್ನು ನೀಡಿ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ಕಳುಹಿಸಿಕೊಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

ದಿಲ್ಲಿ ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ,ಗಂಭೀರವಾಗಿ ಗಾಯಗೊಂಡ ಮೂವರು ಸಂತ್ರಸ್ತರಿಗೆ ತಲಾ 2.5 ಲಕ್ಷ ರೂ, ನಗರದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದ 12 ಪ್ರಯಾಣಿಕರಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ.

ಉತ್ತರ ರೈಲ್ವೆಯಿಂದ ಎಲ್ಲಾ ಪರಿಹಾರವನ್ನು ಮೃತರ ಮತ್ತು ಗಾಯಗೊಂಡವರ ಕುಟುಂಬಸ್ಥರಿಗೆ ನೀಡಲಾಗಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.

ದಿಲ್ಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ. ಪ್ರಯಾಣಿಕರಿಗೆ ರೈಲುಗಳ ಕುರಿತ ಗೊಂದಲ ಕಾಲ್ತುಳಿತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗಿದ್ದರೂ, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News