ಬಾಬಾ ಸಿದ್ದೀಕ್ ಹತ್ಯೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ

Update: 2024-10-26 15:27 GMT

ಬಾಬಾ ಸಿದ್ದೀಕ್ | PC : PTI 

ಮುಂಬೆ : ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಮತ್ತೋರ್ವ ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುರ್ಜೀತ್ ಸುಶೀಲ್ ಸಿಂಗ್ ಎಂದು ಗುರುತಿಸಲಾಗಿದೆ. ಮುಂಬೈ ಹಾಗೂ ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪಂಜಾಬ್‌ನ ಲುಧಿಯಾನದಿಂದ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುರ್ಜೀತ್ ಸುಶೀಲ್ ಸಿಂಗ್ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಹತ್ಯೆ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಪೊಲೀಸ್ ವರಿಷ್ಠ ಗೌರವ್ ಯಾದವ್, ‘‘ಇದು ಪ್ರಕರಣಕ್ಕೆ ಮಹತ್ವದ ತಿರುವು. ಪಂಜಾಬ್ ಪೊಲೀಸರೊಂದಿಗೆ ಮುಂಬೈ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಮುಂಬೈ ನಿವಾಸಿ ಸುಜೀತ್ ಸುಶೀಲ್ ಸಿಂಗ್‌ನನ್ನು ಬಂಧಿಸಲಾಗಿದೆ’’ ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News