4,037 ಕೋಟಿ ರೂ.ಬ್ಯಾಂಕ್ ವಂಚನೆ ಪ್ರಕರಣ | ಐದು ರಾಜ್ಯಗಳಲ್ಲಿ 503.16 ಕೋಟಿ ರೂ. ಆಸ್ತಿಗಳನ್ನು ಜಪ್ತಿ ಮಾಡಿದ ಈಡಿ

Update: 2024-10-28 15:31 GMT

PC : @dir_ed

ಹೊಸದಿಲ್ಲಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 4,037 ಕೋಟಿ ರೂ.ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ವು ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ ಮತ್ತು ಆಂಧ್ರಪ್ರದೇಶಗಳಲ್ಲಿ 503.16 ಕೋಟಿ ರೂ.ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿದೆ.

ಅ.24ರಂದು ಈ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಈಡಿ ಸೋಮವಾರ ತಿಳಿಸಿದೆ. ಕ್ರಿಮಿನಲ್ ಒಳಸಂಚು, ವಂಚನೆ ಮತ್ತು ಫೋರ್ಜರಿ ಆರೋಪಗಳಲ್ಲಿ ಸಿಬಿಐ ಕಾರ್ಪೊರೇಟ್ ಪವರ್ ಲಿ.ಮತ್ತು ಅದರ ಪ್ರವರ್ತಕರು ಹಾಗೂ ನಿರ್ದೇಶಕರಾದ ಮನೋಜ ಜಯಸ್ವಾಲ್, ಅಭಿಜೀತ ಜಯಸ್ವಾಲ್, ಅಭಿಷೇಕ ಜಯಸ್ವಾಲ್ ಮತ್ತು ಇತರರ ವಿರುದ್ಧ ದಾಖಲಿಸಿರುವ ಪ್ರಕರಣದ ಆಧಾರದಲ್ಲಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ)ಯಡಿ ತನಿಖೆಯನ್ನು ನಡೆಸುತ್ತಿದೆ.

ಆರೋಪಿಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಫೋರ್ಜರಿ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆದುಕೊಂಡಿದ್ದರು ಮತ್ತು ಅದನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಂಡು ಬ್ಯಾಂಕಿಗೆ 4,037 ಕೋಟಿ ರೂ.ಗಳ ನಷ್ಟವನ್ನುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News