ಬಿಜೆಪಿ ಸೇರಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ಥಳಿಸಿ ಚಿತ್ರಹಿಂಸೆ ನೀಡಲಾಯಿತು: ಸಾಕೇತ್ ಗೋಖಲೆ

Update: 2024-04-30 15:23 GMT

ಸಾಕೇತ್ ಗೋಖಲೆ | PC : PTI  

ಹೊಸದಿಲ್ಲಿ : ಬಿಜೆಪಿ ಸೇರಲು ಮತ್ತು ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ತನಗೆ ಕಾರಾಗೃಹದಲ್ಲಿ ಥಳಿಸಲಾಯಿತು ಹಾಗೂ ಚಿತ್ರ ಹಿಂಸೆ ನೀಡಲಾಯಿತು ಎಂದು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರು ಹೇಳಿದ್ದಾರೆ.

ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಅವರೊಂದಿಗೆ ಮನಬಿಚ್ಚಿ ಮಾತನಾಡಿರುವ ಸಾಕೇತ್ ಗೋಖಲೆ, ತಾನು ಜೈಲಿನಲ್ಲಿ ಒಂದು ವರ್ಷ ಕಾಲ ಎದುರಿಸಿದ ಸಂಕಷ್ಟವನ್ನು ಬಿಚ್ಚಿಟ್ಟಿದ್ದಾರೆ.

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಆಡಳಿತದಲ್ಲಿ ಭಾರತದ ವಿರೋಧ ಪಕ್ಷದ ನಾಯಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರು ವಿವರಿಸಿದ್ದಾರೆ.

‘‘ಇದು ನನ್ನ ಕುರಿತದ್ದಲ್ಲ, ನಾನೊಂದು ನಿದರ್ಶನವೂ ಅಲ್ಲ. ಆದರೆ, ಇದು ಭಾರತದ ರಾಜಕಾರಣದಲ್ಲಿ ಹೆಚ್ಚುತ್ತಿರುವ ಸರ್ವಾಧಿಕಾರದ ಲಕ್ಷಣವನ್ನು ಎತ್ತಿ ತೋರಿಸುತ್ತದೆ’’ಎಂದು ಅವರು ಹೇಳಿದ್ದಾರೆ. ಅಲ್ಲದೆ, ಪ್ರಜಾಪ್ರಭುತ್ವ ತತ್ವಗಳ ಅವನತಿ ಕುರಿತು ಎಚ್ಚರಿಸಿದ್ದಾರೆ.

‘‘ಮೋದಿ ಆಡಳಿತ ಪ್ರತಿಪಕ್ಷಗಳನ್ನು ಗುರಿಯಾಗಿಸಲು ಹಾಗೂ ದುರ್ಬಲಗೊಳಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಇದು ಭಾರತದ ಪ್ರಜಾಪ್ರಭುತ್ವದ ತಳಹದಿಯನ್ನೇ ಅಪಾಯಕ್ಕೆ ಸಿಲುಕಿಸುತ್ತದೆ’’ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News