×
Ad

ಬಿಹಾರ: ಮದುವೆ ಸಮಾರಂಭದಲ್ಲಿ ಪಾರ್ಕಿಂಗ್ ವಿವಾದ; ಗುಂಡಿಟ್ಟು ಇಬ್ಬರ ಹತ್ಯೆ

Update: 2025-04-21 20:53 IST

ಸಾಂದರ್ಭಿಕ ಚಿತ್ರ | PC : PTI

ಆರಾ: ಬಿಹಾರದ ಭೋಜಪುರ ಜಿಲ್ಲೆಯ ಲಹರ್ಪಾ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾರ್ಕಿಂಗ್ ವಿಷಯದಲ್ಲಿ ನಡೆದ ಜಗಳವು ಹಿಂಸೆಗೆ ತಿರುಗಿದ ಬಳಿಕ ಇಬ್ಬರು ಗುಂಡೇಟಿಗೆ ಬಲಿಯಾಗಿದ್ದು, ಇತರ ಐವರು ಗಾಯಗೊಂಡಿದ್ದಾರೆ ಎಂದು ಪೋಲಿಸರು ಸೋಮವಾರ ತಿಳಿಸಿದ್ದಾರೆ.

ರವಿವಾರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ. ಮದುವೆ ಸಮಾರಂಭದ ಸ್ಥಳದಲ್ಲಿ ವಾಹನಗಳನ್ನು ಪಾರ್ಕ್ ಮಾಡುವ ವಿಷಯದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದ ಬಳಿಕ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಗುಂಡುಗಳನ್ನು ಹಾರಿಸಿತ್ತು. ಗುಂಡೇಟಿನಿಂದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ತೀವ್ರವಾಗಿ ಗಾಯಗೊಂಡಿದ್ದ ಇನ್ನೋರ್ವ ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಪೋಲಿಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೃತರನ್ನು ಲವಕುಶ ಮತ್ತು ರಾಹುಲ್ ಎಂದು ಗುರುತಿಸಲಾಗಿದೆ.

ಗುಂಡೇಟಿನಿಂದ ಗಾಯಗೊಂಡಿರುವ ಐವರು ಜಿಲ್ಲಾಕೇಂದ್ರ ಆರಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲಿಸರು ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News