ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
Update: 2024-04-23 15:49 GMT
ಹೊಸದಿಲ್ಲಿ : ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಭಾಷೆ ಹಾಗೂ ಪ್ರಾದೇಶಿಕ ವಿಭಜನೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕೇರಳದ ವಯನಾಡ್‌ನ ಸಂಸದರಾಗಿರುವ ರಾಹುಲ್ ಗಾಂಧಿ ಅವರು ತನ್ನ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಉತ್ತರ ಹಾಗೂ ದಕ್ಷಿಣ ಭಾರತದ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಭಾಷೆ ಹಾಗೂ ಪ್ರಾಂತ್ಯದ ಹೆಸರಲ್ಲಿ ದೇಶ ಸಂಘರ್ಷದಲ್ಲಿ ತೊಡಗಲು ರಾಹುಲ್ ಗಾಂಧಿ ಅವರು ನಿರಂತರ ಪಿತೂರಿ ನಡೆಸುತ್ತಿರುವುದರ ಕುರಿತು ನಾವು ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚೌಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.