ಮಹಾರಾಷ್ಟ್ರದ ತಾರಾ ಪ್ರಚಾರಕರ ಪಟ್ಟಿಯಿಂದ ಮುಖ್ಯಮಂತ್ರಿ ಏಕನಾಥ್ ಶಿಂದೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೆಸರುಗಳನ್ನು ಕೈಬಿಟ್ಟ ಬಿಜೆಪಿ

Update: 2024-04-13 05:48 GMT

Photo: PTI

ಮುಂಬೈ: ಮಹಾರಾಷ್ಟ್ರದ ತಾರಾ ಪ್ರಚಾರಕರ ಪಟ್ಟಿಯಿಂದ ಮುಖ್ಯಮಂತ್ರಿ ಏಕನಾಥ್ ಶಿಂದೆ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೆಸರುಗಳನ್ನು ಶುಕ್ರವಾರ ಬಿಜೆಪಿ ಕೈಬಿಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 40 ತಾರಾ ಪ್ರಚಾರಕರ ಪರಿಷ್ಕೃತ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಬಿಜೆಪಿ ಸಲ್ಲಿಸಿದೆ.

ಈ ಕುರಿತು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿರುವ ಬಿಜೆಪಿಯ ಅರುಣ್ ಸಿಂಗ್, ಮಹಾರಾಷ್ಟ್ರದಲ್ಲಿ ನಡೆಯಲಿರುವ ನಾಲ್ಕು ಮತ್ತು ಐದನೆಯ ಹಂತದ ಚುನಾವಣೆಯಲ್ಲಿ ಕಾಣಿಸಿಕೊಳ್ಳಲಿರುವ ಉಳಿದ ಲೋಕಸಭಾ ಕ್ಷೇತ್ರಗಳಿಗೆ ನಿಗದಿಪಡಿಸಿರುವ ಕಾಲ ಮಿತಿಯೊಳಗೆ ಪರಿಷ್ಕೃತ ಪಟ್ಟಿಯನ್ನು ಸಲ್ಲಿಸುವವರೆಗೂ ಈ ಪಟ್ಟಿಯನ್ನು ಮಾನ್ಯ ಎಂದು ಪರಿಗಣಿಸತಕ್ಕದ್ದು” ಎಂದು ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ, ಪ್ರಜಾ ಪ್ರಾತಿನಿಧ್ಯ ಕಾಯ್ದೆ ಹಾಗೂ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಇತರ ಪಕ್ಷಗಳ ರಾಜಕಾರಣಿಗಳನ್ನು ತನ್ನ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಂಡಿರುವ ಬಿಜೆಪಿಯ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಶರದ್ ಪವಾರ್ ಬಣ) ಭಾರತೀಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಇತರೆ ಪಕ್ಷಗಳ ರಾಜಕಾರಣಿಗಳನ್ನು ತನ್ನ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವುದು ಪ್ರಜಾ ಪ್ರಾತಿನಿಧ್ಯ್ ಕಾಯ್ದೆಯ ಸೆಕ್ಷನ್ 77ರ ಉಲ್ಲಂಘನೆ ಎಂದು ಎನ್ಸಿಪಿ (ಶರದ್ ಪವಾರ್ ಬಣ) ವಾದಿಸಿತ್ತು.

ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಿಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಯು ಎಪ್ರಿಲ್ 19ರಂದು ನಡೆಯಲಿದ್ದು, ಈ ಹಂತದಲ್ಲಿ ವಿದರ್ಭ ಲೋಕಸಭಾ ಕ್ಷೇತ್ರಗಳು ಸೇರಿದೆ. ಮೇ 20ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಈ ಹಂತದಲ್ಲಿ ಮುಂಬೈ ಲೋಕಸಭಾ ಕ್ಷೇತ್ರಗಳು ಸೇರಿವೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News