ಎಸ್‌ಸಿ, ಎಸ್‌ಟಿ, ಒಬಿಸಿಗಳನ್ನು ಮೀಸಲಾತಿಯಿಂದ ದೂರ ಇರಿಸುವ ವಿಧಾನದಲ್ಲಿ ನೇಮಕಾತಿ ಮಾಡುತ್ತಿರುವ ಬಿಜೆಪಿ: ಖರ್ಗೆ

Update: 2024-08-17 15:36 GMT

ಮಲ್ಲಿಕಾರ್ಜುನ ಖರ್ಗೆ | PC : PTI 

ಲಕ್ನೋ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳನ್ನು ದೂರ ಇರಿಸುವ ವಿಧಾನದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಉದ್ಯೋಗಕ್ಕೆ ನೇಮಕಾತಿ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದ್ದಾರೆ.

ಸಂವಿಧಾನ ಒಳಗೊಂಡ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸಮಾನತೆಯ ನಿಯಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಅಗತ್ಯತೆ ಇದೆ. ಸಾಮಾಜಿಕ ನ್ಯಾಯಕ್ಕಾಗಿಯೇ ಕಾಂಗ್ರೆಸ್ ಜಾತಿ ಗಣತಿ ನಡೆಸುವಂತೆ ಆಗ್ರಹಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು.

‘ಎಕ್ಸ್’ನ ಹಿಂದಿ ಪೋಸ್ಟ್‌ನಲ್ಲಿ ಖರ್ಗೆ, ಸಂವಿಧಾನವನ್ನು ನಿರ್ಲಕ್ಷಿಸುತ್ತಿರುವ ಬಿಜೆಪಿ ಮೀಸಲಾತಿಯ ಮೇಲೆ ಎರಡು ರೀತಿಯ ದಾಳಿ ನಡೆಸಿದೆ ! ಇಂದು ಮೋದಿ ಸರಕಾರ ಕೇಂದ್ರದ ಜಂಟಿ ಕಾರ್ಯದರ್ಶಿ, ನಿರ್ದೇಶಕರು ಉಪ ಕಾರ್ಯದರ್ಶಿಯ ಕನಿಷ್ಠ 45 ಹುದ್ದೆಗಳ ನೇಮಕಾತಿಗೆ ಜಾಹೀರಾತು ಪ್ರಕಟಿಸಿದೆ. ಆದರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಇದರಲ್ಲಿ ಮೀಸಲಾತಿ ಇದೆಯೇ? ಖರ್ಗೆ ಆರೋಪಿಸಿದ್ದಾರೆ.

ಯೋಜಿತ ಪಿತೂರಿಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಉದ್ಯೋಗಕ್ಕೆ ಇಂತಹ ನೇಮಕಾತಿಗಳನ್ನು ಮಾಡುತ್ತಿದೆ. ಇದರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳನ್ನು ದೂರವಿಡಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ 69 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ‘‘ಮೀಸಲಾತಿ ಹಗರಣ’’ ಹೈಕೋರ್ಟ್‌ನ ನಿರ್ಧಾರದಿಂದ ಈಗ ಬೆಳಕಿಗೆ ಬಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘‘ಮೀಸಲಾತಿ ಹಗರಣ’’ದ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಅವರಿಗೆ ಪತ್ರ ಬರೆಯುವ ಮೂಲಕ ವಂಚಿತ ಅಭ್ಯರ್ಥಿಗಳ ಪರವಾಗಿ ಧ್ವನಿ ಎತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News