ಮೋದಿ ನಾಯಕತ್ವದಲ್ಲಿ ಬಿಜೆಪಿ ಟೈಟಾನಿಕ್ ಹಡಗಿನಂತೆ ಮುಳುಗಲಿದೆ: ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

Update: 2024-07-15 13:29 IST
ಮೋದಿ ನಾಯಕತ್ವದಲ್ಲಿ ಬಿಜೆಪಿ ಟೈಟಾನಿಕ್ ಹಡಗಿನಂತೆ ಮುಳುಗಲಿದೆ: ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ / ಸುಬ್ರಮಣಿಯನ್ ಸ್ವಾಮಿ (PTI)

  • whatsapp icon

ಹೊಸದಿಲ್ಲಿ: ನರೇಂದ್ರ ಮೋದಿ ಅವರಿಗೇ ಪಕ್ಷವನ್ನು ಮುನ್ನಡೆಸಲು ಬಿಟ್ಟರೆ, ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುವುದನ್ನು ಪಕ್ಷದಲ್ಲಿರುವ ನಾವೆಲ್ಲರೂ ನೋಡಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯ ಕಟು ಟೀಕಾಕಾರ ಹಾಗೂ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಸಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, "ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುವುದನ್ನು ಪಕ್ಷದಲ್ಲಿನ ನಾವೆಲ್ಲರೂ ನೋಡಬೇಕಿದ್ದರೆ, ಮೋದಿ ಅತ್ಯುತ್ತಮ ನಾವಿಕ" ಎಂದು ವ್ಯಂಗ್ಯವಾಡಿದ್ದಾರೆ. ಉಪ ಚುನಾವಣಾ ಫಲಿತಾಂಶವು ಬಿಜೆಪಿ ಎಂದೆಂದಿಗೂ ಮುಳುಗುವಂತೆ ತಳ ಒಡೆದಿರುವುದನ್ನು ತೋರಿಸುತ್ತಿದೆ" ಎಂದೂ ಅವರು ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಪ್ರಕಟವಾದ ವಿಧಾನಸಭಾ ಉಪ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವು ಭಾರಿ ಗೆಲುವು ಸಾಧಿಸಿರುವ ಬೆನ್ನಿಗೇ ಸುಬ್ರಮಣಿಯನ್ ಸ್ವಾಮಿಯಿಂದ ಈ ಹೇಳಿಕೆ ಹೊರ ಬಿದ್ದಿದೆ. ಉಪ ಚುನಾವಣೆ ನಡೆದ 13 ಸ್ಥಾನಗಳ ಪೈಕಿ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದರೆ, ಬಿಜೆಪಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಉಳಿದೊಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ಗೆಲುವು ಕಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News