ಬಾಲಿವುಡ್ ನ ಖ್ಯಾತ ಗಾಯಕಿ ಅನುರಾಧ ಪೊಡ್ವಾಲ್ ಬಿಜೆಪಿ ಸೇರ್ಪಡೆ

Update: 2024-03-16 09:23 GMT

ಅನುರಾಧ ಪೊಡ್ವಾಲ್ | Photo: NDTV 

ಹೊಸದಿಲ್ಲಿ: ಲೋಕಸಭಾ ಚುನಾವಣೆಗೂ ಮುನ್ನ, ಬಾಲಿವುಡ್ ನ ಖ್ಯಾತ ಗಾಯಕಿ ಅನುರಾಧ ಪೊಡ್ವಾಲ್ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ನಾಯಕರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನುರಾಧ ಪೊಡ್ವಾಲ್, ಪ್ರಧಾನಿ ನರೇಂದ್ರ ಮೋದಿಅವರ ನೇತೃತ್ವದ ಬಿಜೆಪಿಯನ್ನು ಸೇರ್ಪಡೆಯಾಗಲು ಸಂತಸವಾಗುತ್ತಿದೆ ಎಂದು ಹೇಳಿದರು.

ದೇಶದ ನಾಲ್ಕನೆಯ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಗೆ ಭಾಜನರಾಗಿರುವ ಅನುರಾಧ ಪೊಡ್ವಾಲ್, ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹಾಗೂ ಪ್ರಧಾನ ವಕ್ತಾರ ಅನಿಲ್ ಬಲೂನಿ ಹಾಗೂ ಇನ್ನಿತರ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News