ದಿಲ್ಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ. ಕವಿತಾ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ
Update: 2024-04-12 11:15 GMT
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿಯೇ ಸಿಬಿಐ ಬಂಧಿಸಿದ ನಂತರ ಅವರನ್ನು ಮೂರು ದಿನಗಳ ಸಿಬಿಐ ಕಸ್ಟಡಿಗೆ ವಹಿಸಲಾಗಿದೆ.
ತೆಲಂಗಾಣಾದ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಮದ್ಯ ಪರವಾನಗಿಗಳನ್ನು ಪಡೆಯಲು ದಿಲ್ಲಿಯ ಆಡಳಿತ ಹೊಂದಿರುವ ಆಪ್‌ಗೆ ಕೋಟ್ಯಂತರ ರೂಪಾಯಿ ಲಂಚ ಪಾವತಿಸಿದ “ದಕ್ಷಿಣದ ಗುಂಪಿನ” ಭಾಗವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಲಂಚದ ಹಣವನ್ನು ಆಪ್ ತನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದೆ ಎಂದು ಈಡಿ ಹೇಳುತ್ತಿದೆ. ಈಗಾಗಲೇ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.