ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

Update: 2024-01-15 07:22 GMT

ಮಾಯಾವತಿ 

ಲಕ್ನೊ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‍ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರಾದರೂ, ಚುನಾವಣೋತ್ತರ ಮೈತ್ರಿ ಸಾಧ್ಯತೆಯನ್ನೂ ಅಲ್ಲಗಳೆದಿಲ್ಲ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಮ್ಮ ಜನ್ಮದಿನದ ಅಂಗವಾಗಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಾಯಾವತಿ, ತಾನು ರಾಜಕೀಯದಿಂದ ನಿವೃತ್ತರಾಗುವುದಾಗಿ ಕೆಲವು ಮಾಧ್ಯಮಗಳಲ್ಲಿನ ವರದಿಗಳನ್ನು ಅಲ್ಲಗಳೆದಿದ್ದಾರೆ.

ಎಪ್ರಿಲ್-ಮೇಯಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಹಾಗೂ ನಾವು ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ. ಚುನಾವಣೋತ್ತರ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ನಮ್ಮ ಪಕ್ಷವು ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ಪರಿಗಣಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಿಎಸ್‍ಪಿ ಪಕ್ಷವು ಸ್ಪರ್ಧೆಗಿಳಿದಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News