ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

Update: 2024-08-08 05:57 GMT

ಬುದ್ಧದೇವ್ ಭಟ್ಟಾಚಾರ್ಯ (Photo: NDTV)

ಕೋಲ್ಕತ್ತಾ: ಸಿಪಿಎಂ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಬುದ್ಧದೇವ್ ಭಟ್ಟಾಚಾರ್ಯ ಅವರ ಸಾವಿನ ಬಗ್ಗೆ ಅವರ ಪುತ್ರ ಸುಚೇತನ್ ಭಟ್ಟಾಚಾರ್ಯ ಅಧಿಕೃತವಾಗಿ ಘೋಷಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಭಟ್ಟಾಚಾರ್ಯ ಅವರು ಕೆಲವು ವರ್ಷಗಳಿಂದ ಮನೆಯಲ್ಲೇ ಇದ್ದರು. 

ಬುದ್ಧದೇವ್ ಭಟ್ಟಾಚಾರ್ಯ ಅವರು ದೀರ್ಘಕಾಲದಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣದಿಂದ ಅವರು ಕಳೆದ ಕೆಲವು ವರ್ಷಗಳಿಂದ ಮನೆಯಲ್ಲೇ ಇದ್ದರು. ಆದರೆ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಅವರು 2000 ರಿಂದ 2011 ರವರೆಗೆ ಸತತ 11 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News