ಶಿಕ್ಷಣ, ಉದ್ಯೋಗ ಹಾಗೂ ಕೌಶಲ ತರಬೇತಿಗೆ ರೂ. 1.48. ಲಕ್ಷ ಕೋಟಿ: ಸಚಿವೆ ನಿರ್ಮಲಾ ಸೀತಾರಾಮನ್

Update: 2024-07-23 06:52 GMT

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (PTI)

ಹೊಸ ದಿಲ್ಲಿ: 2024-25ರ ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಕೌಶಲ ತರಬೇತಿಗೆ ರೂ. 1.48 ಲಕ್ಷ ಕೋಟಿ ಒದಗಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದರು.

ಸತತ ಏಳನೆಯ ಬಾರಿ ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್ ಉದ್ಯೋಗ, ಕೌಶಲ ತರಬೇತಿ, ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮಧ್ಯಮ ವರ್ಗವನ್ನು ಕೇಂದ್ರೀಕರಿಸಿದೆ ಎಂದು ಹೇಳಿದರು.

ಕೇಂದ್ರ ಸರಕಾರವು ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಿದ್ದು, ಇದರಿಂದ ದೇಶದ 80 ಕೋಟಿ ಜನರಿಗೆ ಲಾಭವಾಗಲಿದೆ ಎಂದು ತಿಳಿಸಿದರು.

ಮಧ್ಯಂತರ ಬಜೆಟ್‌ನಲ್ಲಿ ಪ್ರಸ್ತಾಪಿಸಿದಂತೆ ಬಡವರು, ಮಹಿಳೆಯರು, ಯುವಜನರು ಹಾಗೂ ರೈತರ ಬಗ್ಗೆ ಗಮನ ಕೇಂದ್ರೀಕರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ದೇಶವನ್ನು ಬಲಿಷ್ಠ ಪ್ರಗತಿ ಹಾಗೂ ಸಮಗ್ರ ಸಮೃದ್ಧತೆಯೆಡೆಗೆ ಕೊಂಡೊಯ್ಯಲು ದೇಶದ ಜನರು ಮೋದಿ ಸರಕಾರಕ್ಕೆ ಒಂದು ವಿಶಿಷ್ಟ ಅವಕಾಶ ಒದಗಿಸಿದ್ದಾರೆ ಎಂದೂ ಅವರು ಅಭಿಪ್ರಾಯ ಪಟ್ಟರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News