ಗುಜರಾತ್‌ ಬಳಿಕ ಜಾರ್ಖಂಡ್ ನಲ್ಲೂ ಕಟ್ಟಡ ಕುಸಿತ: ನಾಲ್ವರ ರಕ್ಷಣೆ, ಅವಶೇಷಗಳಡಿ ಹಲವರು ಸಿಲುಕಿಕೊಂಡಿರುವ ಶಂಕೆ

Update: 2024-07-07 07:48 GMT

Photo: PTI

ದಿಯೋಗಢ್ (ಝಾರ್ಖಂಡ್): ರವಿವಾರ ಬೆಳಗ್ಗೆ ಝಾರ್ಖಂಡ್ ನ ದಿಯೋಗಢ್ ಜಿಲ್ಲೆಯಲ್ಲಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡಗಳ ಅವಶೇಷಗಳಡಿಯಿಂದ ನಾಲ್ವರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂಜಾನೆ 6 ಗಂಟೆಗೆ ಕಟ್ಟಡವು ಕುಸಿದು ಬಿದ್ದಿದ್ದು, ಅದರ ಅವಶೇಷಗಳಡಿಯಿಂದ ನಾಲ್ವರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ಸ್ಥಳದಲ್ಲಿ ನಿಯೋಜಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ದಿಯೋಗಢ್ ನ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಋತ್ವಿಕ್ ಶ್ರೀವಾಸ್ತವ, “ಇಲ್ಲಿಯವರೆಗೆ ನಾಲ್ವರನ್ನು ರಕ್ಷಿಸಲಾಗಿದೆ. ಇನ್ನೂ ಕೆಲವರು ಅವಶೇಷಗಡಿ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆಯು ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ.

ರಕ್ಷಿಸಲಾಗಿರುವ ನಾಲ್ವರನ್ನು ಚಿಕಿತ್ಸೆಗಾಗಿ ದಿಯೋಗಢ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವಶೇಷಗಳಡಿ ಸಿಲುಕಿಕೊಂಡಿರುವ ವ್ಯಕ್ತಿಗಳನ್ನು ಹೊರತೆಗೆಯುವ ಪ್ರಯತ್ನಗಳು ಪ್ರಗತಿಯಲ್ಲಿವೆ ಎಂದು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಇನ್ಸ್ ಪೆಕ್ಟರ್ ರಣಧೀರ್ ಕುಮಾರ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News