ಆರ್ಥಿಕ ಅವ್ಯವಹಾರ ಆರೋಪ | ಆರ್.ಜಿ.ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸಕ್ಕೆ ಸಿಬಿಐ ದಾಳಿ

Update: 2024-08-25 22:50 IST
ಆರ್ಥಿಕ ಅವ್ಯವಹಾರ ಆರೋಪ | ಆರ್.ಜಿ.ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸಕ್ಕೆ ಸಿಬಿಐ ದಾಳಿ
  • whatsapp icon

ಕೋಲ್ಕತಾ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಕೋಲ್ಕತಾ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ರವಿವಾರ ಮುಂಜಾನೆ ದಾಳಿ ನಡೆಸಿದ್ದಾರೆ.

ಕಿರಿಯ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಯಾದ ಕೋಲ್ಕತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜ್‌ನಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಗಳ ಆರೋಪಗಳಿಗೆ ಸಂಬಂಧಿಸಿ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದ ಇತರ 14 ಸ್ಥಳಗಳಲ್ಲಿಯೂ ಸಿಬಿಐ ಶೋಧ ಕಾರ್ಯಾಚರಣೆಯನ್ನು ನಡೆಸಿದೆ.

ಈಗಾಗಲೇ ಕಿರಿಯ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿರುವ ಕೋಲ್ಕತಾ ಹೈಕೋರ್ಟ್, ಡಾ.ಸಂದೀಪ್ ಘೋಷ್ ಅವರು ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಆರೋಪಗಳಿಗೆ ಸಂಬಂಧಿಸಿ ತನಿಖೆಯನ್ನೂ ಸಿಬಿಐಗೆ ವಹಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News