ವೈದ್ಯೆಯ ಕೊಲೆ ಪ್ರಕರಣ | ತನಿಖೆಗೆ ಕೋಲ್ಕತ್ತಾ ತಲುಪಿದ ಸಿಬಿಐ

Update: 2024-08-14 14:37 IST
ವೈದ್ಯೆಯ ಕೊಲೆ ಪ್ರಕರಣ | ತನಿಖೆಗೆ ಕೋಲ್ಕತ್ತಾ ತಲುಪಿದ ಸಿಬಿಐ

Photo: PTI

  • whatsapp icon

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಮಹಿಳಾ ವೈದ್ಯರೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಹಿರಿಯ ಸಿಬಿಐ ಅಧಿಕಾರಿಗಳ ತಂಡವೊಂದು ಬುಧವಾರ ಕೋಲ್ಕತ್ತಾ ತಲುಪಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ವೈದ್ಯಕೀಯ ಹಾಗೂ ವಿಧಿ ವಿಜ್ಞಾನ ತಜ್ಞರನ್ನು ಒಳಗೊಂಡಿರುವ ಸಿಬಿಐ ತಂಡವು ಆಗಸ್ಟ್ 9ರಂದು ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿನಿರತ ವೈದ್ಯೆಯೊಬ್ಬರ ಮೃತ ದೇಹ ದೊರೆತಿದ್ದ ಸೆಮಿನಾರ್ ಹಾಲ್ ಗೆ ಭೇಟಿ ನೀಡಲಿದೆ ಎಂದು ಅವರು ಹೇಳಿದ್ದಾರೆ.

ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆಯ ಪ್ರಕರಣವನ್ನು ಮಂಗಳವಾರ ಕಲ್ಕತ್ತಾ ಹೈಕೋರ್ಟ್, ಕೋಲ್ಕತ್ತಾ ಪೊಲೀಸರಿಂದ ಸಿಬಿಐ ತನಿಖೆಗೆ ಹಸ್ತಾಂತರಿಸಿತ್ತು.

ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಮೂಲಗಳು ತಿಳಿಸಿವೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News