ಅಂತ್ಯಕ್ರಿಯೆ ಸ್ಥಳದ ಕುರಿತ ಮನಮೋಹನ್ ಸಿಂಗ್ ಕುಟುಂಬದ ಮನವಿ ಕೇಂದ್ರದಿಂದ ತಿರಸ್ಕೃತ: ಸುಖ್‌ಬೀರ್ ಸಿಂಗ್ ಬಾದಲ್ ಆರೋಪ

Update: 2024-12-27 18:00 GMT

ಮನಮೋಹನ್ ಸಿಂಗ್ | PC : PTI

ಹೊಸದಿಲ್ಲಿ, ಡಿ. 27: ಸ್ಮಾರಕವನ್ನು ನಿರ್ಮಾಣ ಮಾಡಲು ಸಾಧ್ಯವಾಗುವ ಸ್ಥಳದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿಸಬೇಕು ಎಂಬ ಸಿಂಗ್ ಅವರ ಕುಟುಂಬದ ಮನವಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ ಎಂದು ಶಿರೋಮಣಿ ಅಕಾಲಿ ದಳದ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಶುಕ್ರವಾರ ಪ್ರತಿಪಾದಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸರಕಾರಿ ಗೌರವಗಳೊಂದಿಗೆ ನಿಗಮ್‌ಬೋಧ್ ಘಾಟ್‌ನಲ್ಲಿ ಶನಿವಾರ 11.45ಕ್ಕೆ ನೆರವೇರಿಸಲಾಗುವುದು ಎಂದು ಕೇಂದ್ರ ಸರಕಾರ ಘೋಷಿಸಿದೆ.

ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿಕೆ ನೀಡಿ, ಸ್ಮಾರಕವನ್ನು ನಿರ್ಮಾಣ ಮಾಡಲು ಸಾಧ್ಯವಿರುವ ಸ್ಥಳದಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಇದು ಮನಮೋಹನ್ ಸಿಂಗ್ ಅವರಂತಹ ಉನ್ನತ ನಾಯಕರಿಗೆ ನೀಡುವ ಸೂಕ್ತ ಗೌರವವಾಗಿದೆ. ಅಲ್ಲದೆ, ಇದು ಮಾಜಿ ಪ್ರಧಾನಿಗಳ ಹಿಂದಿನ ಸಂಪ್ರದಾಯಗಳಿಗೆ ಅನುಗುಣವಾಗಿದೆ ಎಂದು ಅವರು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಮನವಿ ಕುರಿತಂತೆ ಕೇಂದ್ರ ಸರಕಾರ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News