ಮೂವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅನುಮತಿ
Update: 2023-11-09 13:53 GMT
ಹೊಸದಿಲ್ಲಿ: ಮೂವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಾತಿಗೆ ಕೇಂದ್ರ ಸರಕಾರ ಬುಧವಾರ ಅನುಮೋದನೆ ನೀಡಿದೆ.
ನ್ಯಾಯಮೂರ್ತಿಗಳಾದ ಆಗಸ್ಟಿನ್ ಜಾರ್ಜ್ ಮಸೀಹ್, ಸಂದೀಪ್ ಮೆಹ್ತಾ ಮತ್ತು ಸತೀಶ್‌ಚಂದ್ರ ಶರ್ಮ ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳಲಿರುವ ನ್ಯಾಯಾಧೀಶರಾಗಿದ್ದಾರೆ.
ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗುರುವಾರ ಈ ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದಿರು. ಇದರೊಂದಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆ ತನ್ನ ಪೂರ್ಣ ಬಲವಾದ 34ನ್ನು ತಲುಪಿದೆ.
ಸುಪ್ರೀಂ ಕೋರ್ಟ್ ಕೊಲೀಜಿಯಮ್ ಅವರ ಹೆಸರುಗಳನ್ನು ಸೋಮವಾರ ಶಿಫಾರಸು ಮಾಡಿತ್ತು.
ಸತೀಶ್‌ಚಂದ್ರ ಶರ್ಮ ಈವರೆಗೆ ದಿಲ್ಲಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದರು. ಮಸೀಹ್ ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದರು. ಮೆಹ್ತಾ ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದರು.