NTA ಸುಧಾರಣೆಗೆ ವಿದ್ಯಾರ್ಥಿಗಳು, ಪೋಷಕರಿಂದ ಸಲಹೆಗಳನ್ನು ಆಹ್ವಾನಿಸಿದ ಕೇಂದ್ರ ಸರಕಾರ

Update: 2024-06-28 11:44 GMT

PC : facebook.com / nationaltestingagency

ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವನ್ನು ಸುಧಾರಿಸಲು ಅಥವಾ ಪುನಾರಚನೆ ಮಾಡಲು ಸರಕಾರ ನೇಮಿಸಿರುವ ಸಮಿತಿಯು ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಸಲಹೆಗಳನ್ನು ಆಹ್ವಾನಿಸಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹಾಗೂ ವೃತ್ತಿಪರ ಹುದ್ದೆಗಳಿಗೆ ನಡೆಸಲಾಗುವ ಯುಜಿಸಿ-ನೆಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ವಿರುದ್ಧ ತೀವ್ರ ಸ್ವರೂಪದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೊ ಮಾಜಿ ಮುಖ್ಯಸ್ಥ ಡಾ. ಕೆ.ರಾಧಾಕೃಷ್ಣನ್ ನೇತೃತ್ವದ ಈ ಸಮಿತಿಗೆ www.innovateindia.mygov.in/examination reforms-ta/ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ.

ಜುಲೈ 7ರವರೆಗೆ ಸಾರ್ವಜನಿಕರು ಮೇಲಿನ ಅಂತರ್ಜಾಲ ತಾಣದಲ್ಲಿ ತಮ್ಮ ಸಲಹೆ ಸೂಚನೆಗಳನ್ನು ದಾಖಲಿಸಬಹುದಾಗಿದೆ.

ಈ ನಡುವೆ, ಇಂದಿನ ಸಂಸತ್ ಕಲಾಪದಲ್ಲೂ ನೀಟ್ ಮತ್ತು ನೆಟ್ ಪರೀಕ್ಷೆಗಳು ಪ್ರತಿಧ್ವನಿಸಿದವು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News