NEET-UG ಪರೀಕ್ಷೆಯಲ್ಲಿ ಅಕ್ರಮ: ತನಿಖೆಯನ್ನು ಸಿಬಿಐಗೆ ವಹಿಸಿದ ಕೇಂದ್ರ ಸರಕಾರ

Update: 2024-06-22 18:24 GMT

Photo: PTI

ಹೊಸದಿಲ್ಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ NEET-UG ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.

ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆಯಲ್ಲಿ ಇಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯ ಮುಖ್ಯಸ್ಥರನ್ನು ಅವರ ಸ್ಥಾನದಿಂದ ವಜಾಗೊಳಿಸಿತ್ತು. ಅಲ್ಲದೇ ಜೂ. 23ರಂದು (ರವಿವಾರ) ನಡೆಯಬೇಕಿದ್ದ NEET-PG ಪರೀಕ್ಷೆಯನ್ನೂ ಮುಂದೂಡಲಾಗಿದೆ.

NEET ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಕ್ರಮ/ವಂಚನೆ/ದುಷ್ಕೃತ್ಯಗಳ ಆರೋಪದ ಪ್ರಕರಣಗಳು ವರದಿಯಾಗಿವೆ. ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ NEET-UG ಪ್ರಕರಣದ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News