ಕತ್ತರಿ ಹಾಕಿದರೆ ‘ಎಮರ್ಜೆನ್ಸಿ’ ಗೆ ಪ್ರಮಾಣಪತ್ರ : CBFC

Update: 2024-09-26 13:35 GMT

'ಎಮರ್ಜೆನ್ಸಿ' ಸಿನಿಮಾ | PC : X 

ಮುಂಬೈ: ಕಂಗನಾ ರನೌತ್‌ ನಟನೆಯ 'ಎಮರ್ಜೆನ್ಸಿ' ಸಿನಿಮಾದ ಕೆಲವು ನಿರ್ದಿಷ್ಟ ದೃಶ್ಯಗಳಿಗೆ ಕತ್ತರಿ ಹಾಕಿದರೆ ಸಿನಿಮಾಕ್ಕೆ ಪ್ರಮಾಣಪತ್ರ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್‌ಗೆ ಪುನರ್ ಪರಿಶೀಲನಾ ಸಮಿತಿ ಶಿಫಾರಸಿನಂತೆ CBFC ಗುರುವಾರ ತಿಳಿಸಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಹ ನಿರ್ಮಾಪಕಿಯೂ ಆಗಿರುವ ನಟಿ ಕಂಗನಾ ರಾಣಾವತ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಿಡುಗಡೆಯನ್ನು ವಿಳಂಬಗೊಳಿಸುವ ಉದ್ದೇಶದಿಂದ, ಮಂಡಳಿಯು ಪ್ರಮಾಣ ಪತ್ರ ನೀಡುತ್ತಿಲ್ಲ ಎಂದು ಅವರು ದೂರಿದ್ದರು.

ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಬಹುದು ಎಂಬ ಕಾರಣ ನೀಡಿ ಪ್ರಮಾಣಪತ್ರ ನೀಡಲು ಹಿಂದೇಟು ಹಾಕಿದ CBFC ವಿರುದ್ಧ ಝೀ ಸಂಸ್ಥೆಯು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು.

ಚಿತ್ರತಂಡದ ನಿರ್ಧಾರದಂತೆ 'ಎಮರ್ಜೆನ್ಸಿ' ಸೆಪ್ಟೆಂಬರ್ 6ರಂದು ಬಿಡುಗಡೆಗೊಳ್ಳಬೇಕಿತ್ತು. ಆದರೆ ಸಿಖ್ ಸಮುದಾಯದ ಕುರಿತು ಸಿನಿಮಾದಲ್ಲಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ಆರೋಪಿಸಿ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿತ್ತು.

ಕಳೆದ ವಾರ ನ್ಯಾಯಮೂರ್ತಿಗಳಾದ ಬಾಂಬೆ ಹೈಕೋರ್ಟ್ ಚಲನಚಿತ್ರಕ್ಕೆ ಪ್ರಮಾಣಪತ್ರ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳದ ಸಿಬಿಎಫ್‌ಸಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಎದುರಾಗಬಹುದು ಎಂಬ ಒಂದೇ ಕಾರಣಕ್ಕೆ ಚಲನಚಿತ್ರಕ್ಕೆ ಪ್ರಮಾಣಪತ್ರ ನಿರಾಕರಿಸುವಂತಿಲ್ಲ ಎಂದು ಹೇಳಿತ್ತು. ಅಲ್ಲದೇ ಸೆಪ್ಟೆಂಬರ್ 25ರೊಳಗೆ ತೀರ್ಮಾಕ್ಕೆ ಬರುವಂತೆ ಸೂಚಿಸಿತ್ತು.

ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News