ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ರ ತಿರುಚಿದ ಚಿತ್ರಗಳನ್ನು ಪೋಸ್ಟ್ ಮಾಡಿದ ಆರೋಪ | ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗೆ ಸಮನ್ಸ್
ಮಡ್ಡಿಪಾಡ (ಆಂಧ್ರಪ್ರದೇಶ): ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ತಿರುಚಿದ ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿ ಖ್ಯಾತ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಆಂಧ್ರಪ್ರದೇಶ ಪೊಲೀಸರು ಸಮನ್ಸ್ ನೀಡಿದ್ದಾರೆ.
ಪ್ರಕಾಶಂನ ಜಿಲ್ಲಾ ಪೊಲೀಸರು, ಬುಧವಾರ ಬೆಳಗ್ಗೆ ಹೈದರಾಬಾದ್ ನ ಜುಬಿಲಿ ಹಿಲ್ಸ್‌ನಲ್ಲಿರುವ ವರ್ಮಾ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಖುದ್ದಾಗಿ ನೋಟಿಸ್ ನೀಡಿದರು. ನವೆಂಬರ್ 19ರಂದು ಮಡ್ಡಿಪಾಡು ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆಂದು ಪ್ರಕಾಶ್ ಜಿಲ್ಲಾ ಪೊಲೀಸ್ ಅಧೀಕ್ಷಕ ಎ.ಆರ್. ದಾಮೋದರ್ ಅವರು ತಿಳಿಸಿದ್ದಾರೆ.
ನೋಟಿಸ್ ಸ್ವೀಕರಿಸಿದ ರಾಮ್‌ಗೋಪಾಲ್ ವರ್ಮಾ ಅವರು ತನಿಖೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.ಮಡ್ಡಿಪಾಡು ನಿವಾಸಿ ರಾಮಲಿಂಗಂ ಎಂಬಪವರು ನೀಡಿದ ದೂರನ್ನು ಆಧರಿಸಿ ರಾಮ್‌ಗೋಪಾಲ್ ವಿರುದ್ಧ ಪೊಲೀಸರು ನವೆಂಬರ್ 11ರಂದು ಪ್ರಕರಣ ದಾಖಲಿಸಲಿಕೊಂಡಿದ್ದಾರೆ.
ಸಿಎಂ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅವರ ಕ್ಷಿುಟುಂಬ ಸದಸ್ಯರ ತಿರುಚಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ರಾಮ್ ಗೋಪಾಲ್ ವರ್ಮಾ ಅವರು ಧಕ್ಕೆ ತಂದಿದ್ದಾರೆಂದು ರಾಮಲಿಂಗಾ ಅವರು ದೂರಿನಲ್ಲಿ ಆಪಾದಿಸಿದ್ದಾರೆ.