ಛತ್ತೀಸಗಢ: ಬುಡಕಟ್ಟು ಮಹಿಳೆಯ ಸಾಮೂಹಿಕ ಅತ್ಯಾಚಾರ; 6 ಆರೋಪಿಗಳ ಬಂಧನ

Update: 2024-08-21 10:39 GMT

   ಸಾಂದರ್ಭಿಕ ಚಿತ್ರ

ರಾಯಗಢ: ಛತ್ತೀಸ್‌ಗಢದ ರಾಯಗಢ ಜಿಲ್ಲೆಯಲ್ಲಿ 27 ವರ್ಷದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ ಆರು ಮಂದಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪುಸೌರ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಸೋಮವಾರ ಸಂತ್ರಸ್ತ ಮಹಿಳೆ ರಕ್ಷಾಬಂಧನ ಹಬ್ಬವನ್ನು ಆಚರಿಸಿ ಸ್ಥಳೀಯ ಜಾತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಮಹಿಳೆ ಮಂಗಳವಾರ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ

ದೂರಿನ ಪ್ರಕಾರ, ಕೆಲವು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಬಲವಂತವಾಗಿ ಹತ್ತಿರದ ಕೊಳದ ದಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಇದುವರೆಗೆ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 70(1) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News