ಛತ್ತೀಸ್‌ಗಡ : ಭದ್ರತಾ ಪಡೆಗಳಿಂದ ನಕ್ಸಲೀಯನ ಹತ್ಯೆ

Update: 2024-04-29 16:15 GMT

ಸಾಂದರ್ಭಿಕ ಚಿತ್ರ

ರಾಯಪುರ: ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಕೊಲ್ಲಲ್ಪಟ್ಟಿದ್ದಾನೆ.

ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಮತ್ತು ಕೋಬ್ರಾ ತಂಡಗಳು ಪ್ರತ್ಯೇಕವಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಕೈಗೊಂಡಿದ್ದವು. ಕಿಸ್ಟಾರಾಮ ಪೋಲಿಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ನಕ್ಸಲರು ಮತ್ತು ಡಿಆರ್‌ಜಿ ತಂಡದ ನಡುವೆ ಗುಂಡಿನ ಕಾಳಗ ನಡೆದಿದೆ. ಘಟನಾ ಸ್ಥಳದಿಂದ ಓರ್ವ ನಕ್ಸಲೀಯನ ಶವ ಮತ್ತು ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸುಕ್ಮಾ ಎಸ್‌ಪಿ ಕಿರಣ ಜಿ.ಚವಾಣ್ ಸುದ್ದಿಸಂಸ್ಥೆಗೆ ತಿಳಿಸಿದರು.

ಈ ಘಟನೆಯೊಂದಿಗೆ ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ ಈ ವರ್ಷ ಇಲ್ಲಿಯವರೆಗೆ 81 ನಕ್ಸಲೀಯರು ಕೊಲ್ಲಲ್ಪಟ್ಟಿದ್ದಾರೆ. ಈ ತಿಂಗಳ 16ರಂದು ಪ್ರದೇಶದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ 29 ನಕ್ಸಲರು ಕೊಲ್ಲಲ್ಪಟ್ಟಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News