ಛತ್ತೀಸ್‌ಗಡ | ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆ

Update: 2024-08-29 16:12 GMT

ಸಾಂದರ್ಭಿಕ ಚಿತ್ರ

ನಾರಾಯಣಪುರ : ಛತ್ತೀಸ್‌ಗಡದ ನಾರಾಯಣಪುರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ ಮೂವರು ಮಹಿಳಾ ನಕ್ಸಲರು ಹತರಾಗಿದ್ದಾರೆ.

ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಅಬೂಝಮಾಡ್ ಅರಣ್ಯದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾಗ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ಗುಂಡಿನ ಕಾಳಗ ಸಂಭವಿಸಿದೆ ಎಂದು ಹಿರಿಯ ಪೋಲಿಸ್ ಅಧಿಕಾರಿಯೋರ್ವರು ತಿಳಿಸಿದರು.

ಘಟನಾ ಸ್ಥಳದಿಂದ ಸಮವಸ್ತ್ರದಲ್ಲಿದ್ದ ಮೂವರು ಮಹಿಳಾ ನಕ್ಸಲರ ಶವಗಳು ಮತ್ತು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಇದರೊಂದಿಗೆ ಈ ವರ್ಷ ಛತ್ತೀಸ್‌ಗಡದಲ್ಲಿ ಭದ್ರತಾ ಸಿಬ್ಬಂದಿಗಳೊಂದಿಗೆ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟ ನಕ್ಸಲರ ಸಂಖ್ಯೆ 145ಕ್ಕೇರಿದೆ ಎಂದು ಪೋಲಿಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News