ಅಪ್ರಾಪ್ತ ವಿದ್ಯಾರ್ಥಿಗಳಿಂದ 3ನೇ ತರಗತಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ, ಹತ್ಯೆ

Update: 2024-07-11 08:44 GMT

Photo credit: indiatoday.in

ನಂದ್ಯಾಲ (ಆಂಧ್ರಪ್ರದೇಶ): ಅಪ್ರಾಪ್ತ ವಿದ್ಯಾರ್ಥಿಗಳು ಎಂಟು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ನಂತರ ಆಕೆಯನ್ನು ಹತ್ಯೆಗೈದಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಆಕೆಯನ್ನು ಹತ್ಯೆಗೈದ ನಂತರ, ಸಾಕ್ಷ್ಯವನ್ನು ನಾಶ ಮಾಡಲು ಅವರು ಮೃತದೇಹವನ್ನು ಕಾಲುವೆಯೊಂದಕ್ಕೆ ಎಸೆದಿದ್ದಾರೆ ಎಂದು ವರದಿಯಾಗಿದೆ.

ಮೃತ ಬಾಲಕಿಯು ಮೂರನೆ ತರಗತಿಯ ವಿದ್ಯಾರ್ಥಿಯಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಇಬ್ಬರು ಆರೋಪಿಗಳು 12 ವರ್ಷ ವಯಸ್ಸಿನವರಾಗಿದ್ದು, ಆರನೆಯ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಮತ್ತೊಬ್ಬ ಬಾಲಕನು 13 ವರ್ಷದವನಾಗಿದ್ದು, ಏಳನೆ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮೃತ ಬಾಲಕಿ ಹಾಗೂ ಆರೋಪಿ ವಿದ್ಯಾರ್ಥಿಗಳಿಬ್ಬರೂ ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಈ ಘಟನೆ ರವಿವಾರದಂದು ಪಗಿಡ್ಯಾಲದಲ್ಲಿ ನಡೆದಿದ್ದರೂ, ಬುಧವಾರ ಪೊಲೀಸರು ಶಂಕಿತರನ್ನು ಬಂಧಿಸಿದ ನಂತರವಷ್ಟೆ ಈ ವಿಷಯ ಸಾರ್ವಜನಿಕರ ಗಮನಕ್ಕೆ ಬಂದಿದೆ.

ರವಿವಾರ ಮೃತ ಬಾಲಕಿಯ ತಂದೆಯು ತನ್ನ ಪುತ್ರಿಯು ಉದ್ಯಾನವನದಲ್ಲಿ ಆಟವಾಡುತ್ತಿದ್ದವಳು ನಂತರ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಬಾಲಕಿಯ ಸುಳಿವನ್ನು ಪತ್ತೆ ಹಚ್ಚಲು ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆಯೊಂದಿಗೆ ಮುಚುಮರ್ರಿ ಉದ್ಯಾನವನದಲ್ಲಿ ಸ್ಥಳೀಯರನ್ನು ವಿಚಾರಣೆಗೊಳಪಡಿಸಿದ್ದರು. ಆದರೆ ಯಾವುದೇ ಸುಳಿವು ದೊರೆಯದೆ ಹೋದಾಗ ಪೊಲೀಸರು ಶೋಧ ಕಾರ್ಯಕ್ಕಾಗಿ ಶ್ವಾನದಳದ ಮೊರೆ ಹೋಗಿದ್ದರು.

ಶೋಧ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶ್ವಾನವು ಮೂವರು ಆರೋಪಿ ಬಾಲಕರ ಮನೆಯೆದುರು ಹೋಗಿ ನಿಂತಿತ್ತು. ಅವರನ್ನು ಪ್ರಾಥಮಿಕ ವಿಚಾರಣೆಗೆ ಒಳಪಡಿಸಿದ ನಂತರ, ಪೊಲೀಸರು ಅವರನ್ನು ಬಂಧಿಸಿದ್ದರು.

ವಿಚಾರಣೆಯ ಸಂದರ್ಭದಲ್ಲಿ ಆರೋಪಿ ಬಾಲಕರು ತಾವು ಮೃತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಂತರ ಆಕೆಯನ್ನು ಹತ್ಯೆಗೈದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯು ಪ್ರಗತಿಯಲ್ಲಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News