ಊಟದಲ್ಲಿ ಜಿರಳೆ ಪತ್ತೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ: ಏರ್ ಇಂಡಿಯಾ

Update: 2024-09-29 05:35 GMT

ಹೊಸದಿಲ್ಲಿ: ದಿಲ್ಲಿಯಿಂದ ನ್ಯೂಯಾರ್ಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೋರ್ವರಿಗೆ ಕೊಟ್ಟ ಊಟದಲ್ಲಿ ಜಿರಳೆ ಕಾಣಿಸಿಕೊಂಡಿದ್ದ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು ಅಗತ್ಯ ಕ್ರಮವನ್ನು ಕೈಗೊಳ್ಳುವುದಾಗಿ ಏರ್ ಇಂಡಿಯಾ ಸಂಸ್ಥೆ ಹೇಳಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಸುಯೇಶಾಸವಂತ, ದಿಲ್ಲಿಯಿಂದ ನ್ಯೂಯಾರ್ಕ್ಗೆ ಪ್ರಯಾಣಿಸುವಾಗ ಏರ್ ಇಂಡಿಯಾ ವಿಮಾನದಲ್ಲಿ ನಮಗೆ ಕೊಟ್ಟ ಆಮ್ಲೆಟ್ ನಲ್ಲಿ ಜಿರಳೆ ಕಾಣಿಸಿಕೊಂಡಿದೆ. ವಿಮಾನದಲ್ಲಿ ಕೊಟ್ಟ ಆಮ್ಲೆಟ್ ನ್ನು ನನ್ನ 2 ವರ್ಷದ ಮಗು ನನ್ನೊಂದಿಗೆ ಅರ್ಧಕ್ಕಿಂತ ಹೆಚ್ಚಿನದನ್ನು ತಿಂದು ಮುಗಿಸಿದೆ. ಇದರಿಂದಾಗಿ ಪುಡ್ ಪಾಯಿಸನ್ ಸಂಭವಿಸಿದೆ ಎಂದು ಆರೋಪಿಸಿದ್ದರು.

ಈ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ನಾವು ಗ್ರಾಹಕರಿಗಾದ ಅನುಭವದ ಬಗ್ಗೆ ವಿಷಾದಿಸುತ್ತೇವೆ. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಏರ್ ಇಂಡಿಯಾ ಪ್ರತಿಕ್ರಿಯೆಯನ್ನು ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News