ಲೋಕಸಭಾ ಚುನಾವಣೆ: ದಿಲ್ಲಿಯಲ್ಲಿ 4:3 ಅನುಪಾತದಲ್ಲಿ ಸೀಟು ಹಂಚಿಕೆಗೆ ಆಪ್-ಕಾಂಗ್ರೆಸ್ ಒಪ್ಪಿಗೆ
Update: 2024-02-24 07:02 GMT
ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಹೋರಾಡಲು ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ 4:3 ಅನುಪಾತದಲ್ಲಿ ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿವೆ. ಗುಜರಾತ್, ಹರ್ಯಾಣ, ಗೋವಾ ಮತ್ತು ಚಂಡೀಗಢದಲ್ಲೂ ಸೀಟು ಹಂಚಿಕೆ ಸೂತ್ರವನ್ನು ಅನುಸರಿಸಲು ಎರಡೂ ಪಕ್ಷಗಳು ಸಹಮತಕ್ಕೆ ಬಂದಿವೆ.
ದಿಲ್ಲಿಯಲ್ಲಿ ಕೇಜ್ರಿವಾಲ್ ಅವರ ಪಕ್ಷ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ, ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ. ಪಶ್ಚಿಮ ದಿಲ್ಲಿ, ದಕ್ಷಿಣ ದಿಲ್ಲಿ, ಪೂರ್ವ ದಿಲ್ಲಿ ಮತ್ತು ಹೊಸದಿಲ್ಲಿಯಲ್ಲಿ ಆಪ್ ಸ್ಪರ್ಧಿಸಲಿದ್ದರೆ ಈಶಾನ್ಯ ದಿಲ್ಲಿ, ವಾಯುವ್ಯ ದಿಲ್ಲಿ ಮತ್ತು ಚಾಂದನಿ ಚೌಕ್‌ನಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ.
2019 ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಏಳು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.