ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್

Update: 2024-07-14 08:15 GMT

ಗೌರವ್ ಗೊಗೊಯ್

ಹೊಸದಿಲ್ಲಿ: ಲೋಕಸಭೆಯಲ್ಲಿ  ಉಪನಾಯಕನನ್ನಾಗಿ ಸಂಸದ ಗೌರವ್ ಗೊಗೊಯಿ ಅವರನ್ನು ರವಿವಾರ ನೇಮಿಸಿರುವ ಕಾಂಗ್ರೆಸ್, ಈ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದೆ. ಗೌರವ್ ಗೊಗೊಯ್ ಅವರಲ್ಲದೆ ಪಕ್ಷದ ಮುಖ್ಯ ಸಚೇತಕರನ್ನಾಗಿ ಸಂಸದ ಕೋಡಿಕುನ್ನಿಲ್ ಸುರೇಶ್ ಹಾಗೂ ಸಚೇತಕರನ್ನಾಗಿ ಮಾಣಿಕ್ ಚಂದ್ ಟಾಗೋರ್ ಹಾಗೂ ಮುಹಮ್ಮದ್ ಜಾವೇದ್ ಅವರನ್ನು ನೇಮಿಸಲಾಗಿದೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಮ್ಮ ಎಕ್ಸ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News