ಮನಮೋಹನ್ ಸಿಂಗ್ ಗೌರವಾರ್ಥ 7 ದಿನ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮ ರದ್ದು

Update: 2024-12-27 06:56 GMT

ಡಾ. ಮನಮೋಹನ್ ಸಿಂಗ್ (PTI)

ಹೊಸದಿಲ್ಲಿ : ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ 7 ದಿನ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮ ರದ್ದಾಗಿದೆ.

ಮುಂದಿನ ಏಳು ದಿನಗಳಲ್ಲಿ ನಿಗದಿಯಾಗಿದ್ದ ಸ್ಥಾಪನಾ ದಿನ ಸೇರಿ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್‌ ತಿಳಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ‘ಎಲ್ಲಾ ಆಂದೋಲನ ಮತ್ತು ಪ್ರಚಾರ ಕಾರ್ಯಕ್ರಮಗಳೂ ರದ್ದು ಮಾಡಲಾಗಿದೆ. ಪಕ್ಷದ ಕಾರ್ಯಕ್ರಮಗಳು 3 ಜನವರಿ 2025 ರಂದು ಪುನರಾರಂಭಗೊಳ್ಳುತ್ತವೆ. ಈ ಶೋಕಾಚರಣೆಯ ಅವಧಿಯಲ್ಲಿ ಪಕ್ಷದ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ

‘ಮನಮೋಹನ ಸಿಂಗ್ ಅವರ ಗೌರವಾರ್ಥ ಕರ್ನಾಟಕದ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ರ್‍ಯಾಲಿಯನ್ನು ರದ್ದು ಮಾಡಲಾಗಿದೆ’ ಎಂದು ಕಾಂಗ್ರೆಸ್‌ ಪ್ರಧಾನ – ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News