ಬಿಜೆಪಿ ಮುನ್ನಡೆ ಬಳಿಕ ಚುನಾವಣಾ ಆಯೋಗದ ವೆಬ್ಸೈಟ್ ನಲ್ಲಿ ಮಾಹಿತಿ ಅಪ್ ಲೋಡ್ ಮಾಡಲಾಗಿದೆ: ಕಾಂಗ್ರೆಸ್ ಆರೋಪ

Update: 2024-10-08 06:59 GMT

ಜೈರಾಮ್ ರಮೇಶ್ (Photo: PTI)

ಹೊಸದಿಲ್ಲಿ: ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಆರಂಭಿಕ ಟ್ರೆಂಡ್ ಗಳಲ್ಲಿ ಬಿಜೆಪಿ ನಾಟಕೀಯವಾಗಿ ಮುನ್ನಡೆಯನ್ನು ಸಾಧಿಸಿದ ಬಳಿಕ ಚುನಾವಣಾ ಆಯೋಗದ ವೆಬ್ಸೈಟ್ ನಲ್ಲಿ ಮತ ಎಣಿಕೆಯ ಡೇಟಾವನ್ನು ಅಪ್ಲೋಡ್ ಮಾಡಲಾಗಿದೆ ಎಂದು ಕಾಂಗ್ರೆಸ್ ದೂರಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಲೋಕಸಭಾ ಚುನಾವಣೆಯಂತೆಯೇ, ಹರ್ಯಾಣ ಚುನಾವಣೆಯಲ್ಲಿ ನಾವು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಚುನಾವಣಾ ಫಲಿತಾಂಶಗಳ ಕ್ಷಣ ಕ್ಷಣದ ಅಂಕಿ-ಅಂಶಗಳ ಅಪ್ಲೋಡ್ ಮಾಡುವ ಕಾರ್ಯದಲ್ಲಿ ನಿಧಾನಗತಿಯನ್ನು ನೋಡಿದ್ದೇವೆ. ದಾರಿ ತಪ್ಪಿಸುವ ರೀತಿ ಮಾಹಿತಿ ಅಪ್ ಲೋಡ್ ಮಾಡಲು ಬಿಜೆಪಿ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆಯಾ ಎಂದು ಅವರು ಪ್ರಶ್ನಿಸಿದ್ದಾರೆ.

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗದ ವೆಬ್ಸೈಟ್ ನಲ್ಲಿನ ಇತ್ತೀಚಿನ ಅಪ್ ಲೋಡ್ ಗಳು ತಿಳಿಸುತ್ತದೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News