ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ: ಹರ್ಯಾಣ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ಧಾಳಿ
ಹೊಸದಿಲ್ಲಿ: ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ದೇಶವನ್ನು ನಾಶಮಾಡಲು ಹೊರಟಿದೆ. ಈ ಬಗ್ಗೆ ನಾವೆಲ್ಲರೂ ಜಾಗೃತರಾಗಿರಬೇಕು. ಈ ಎಲ್ಲಾ ಶಕ್ತಿಗಳಿಗೆ ಮಹಾರಾಷ್ಟ್ರದ ಜನರು ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ದೇಶದಲ್ಲಿ ಸನಾತನ ಪರಂಪರೆಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ ಮತ್ತು ದ್ವೇಷವನ್ನು ಹರಡುವ ಕಾರ್ಖಾನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಸ್ಲಿಮರಲ್ಲಿ ಭಯವನ್ನು ಸೃಷ್ಟಿಸಲು ಬಯಸುತ್ತದೆ, ಆ ಮೂಲಕ ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಪಡೆಯಲು ಬಯಸುತ್ತದೆ. ಹರ್ಯಾಣ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಆದರೆ ಮಹಾರಾಷ್ಟ್ರದಲ್ಲಿ ನಾವು ದೊಡ್ಡ ಗೆಲುವು ಪಡೆಯಬೇಕಿದೆ. ಮಹಾರಾಷ್ಟ್ರದ ಜನರು ಒಂದಾಗುತ್ತಾರೆ ಮತ್ತು ಬಿಜೆಪಿ ಮತ್ತು ಮಹಾಯುತಿ ಮೈತ್ರಿಗೆ ಮತ ಹಾಕುತ್ತಾರೆ ಎಂಬ ಭರವಸೆ ನನಗಿದೆ ಎಂದು ಮೋದಿ ಹೇಳಿದ್ದಾರೆ.