ಜಮ್ಮು ಕಾಶ್ಮೀರ: ಉಮರ್ ಅಬ್ದುಲ್ಲಾ ನೇತೃತ್ವದ ಸರಕಾರಕ್ಕೆ ಕಾಂಗ್ರೆಸ್ ಬಾಹ್ಯ ಬೆಂಬಲ?

Update: 2024-10-16 05:42 GMT
Photo credit: X

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಜಮ್ಮು ಮತ್ತು ಕಾಶ್ಮೀರದಲ್ಲಿ ನೂತನ ಸರಕಾವನ್ನು ರಚಿಸಲು ಸಜ್ಜಾಗಿದೆ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷವು ಉಮರ್ ಅಬ್ದುಲ್ಲಾ ನೇತೃತ್ವದ ಸರಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ. ಸಂಪುಟದ ಭಾಗವಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಅವರು ಶುಕ್ರವಾರ ಶ್ರೀನಗರದಲ್ಲಿ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಅವರಿಗೆ ಕಾಂಗ್ರೆಸ್ ಬೆಂಬಲ ಪತ್ರವನ್ನು ಹಸ್ತಾಂತರಿಸಿದರು. ಅಬ್ದುಲ್ಲಾ ಅವರು ಬುಧವಾರ ಬೆಳಗ್ಗೆ 11:30 ಗಂಟೆಗೆ ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ (SKICC) ನಲ್ಲಿ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿಂದೆ 2009 ರಿಂದ 2014 ರವರೆಗೆ ಕಾಂಗ್ರೆಸ್ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯಾಗಿದ್ದ ಉಮರ್ ಅಬ್ದುಲ್ಲಾ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರಮಾಣ ವಚನ ಬೋಧಿಸಲಿದ್ದಾರೆ. 42 ಜೆಕೆಎನ್‌ಸಿ ಶಾಸಕರು, ನಾಲ್ವರು ಸ್ವತಂತ್ರರು, ಆರು ಕಾಂಗ್ರೆಸ್ ಶಾಸಕರು ಮತ್ತು ಒಬ್ಬ ಸಿಪಿಐ(ಎಂ) ಪ್ರತಿನಿಧಿಗಳ ಬೆಂಬಲದೊಂದಿಗೆ ಅಕ್ಟೋಬರ್ 11 ರಂದು ಅಬ್ದುಲ್ಲಾ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News